25.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಚಿಬಿದ್ರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ.

ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಕಾರು ಚಿಬಿದ್ರೆ ಸಮೀಪಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ವಿದ್ಯುತ್ ಕಂಬ ಹಾನಿಗೊಂಡಿದ್ದರಿಂದ ಚಿಬಿದ್ರೆ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು.

ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಈ ರೀತಿ ಅಪಘಾತಗಳು ಆಗಾಗ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ವಾರ ಇದೇ ಪರಿಸರದ ಸುತ್ತ ವಾಹನವೊಂದು ವಿದ್ಯುತ್ ಕಂಬವನ್ನು ಮುರಿದು ಹಾಕಿ ಪರಾರಿಯಾದ ಘಟನೆ ನಡೆದಿದೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!