25.5 C
ಪುತ್ತೂರು, ಬೆಳ್ತಂಗಡಿ
October 15, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೃಹಲಕ್ಷ್ಮೀಯರ ಖಾತೆಗೆ ರೂ.340.31 ಕೋಟಿ: ಬಿ. ಪದ್ಮನಾಭ ಸಾಲ್ಯಾನ್-ಗ್ಯಾರಂಟಿ ಯೋಜನೆಯಡಿ 56,347 ಯಜಮಾನಿಯರಿಗೆ ರೂ.2000 ಮಾಸಿಕ ನೆರವು

ಬೆಳ್ತಂಗಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯು ಕುಟುಂಬದ ಯಜಮಾನಿಯರ ಸ್ವಾವಲಂಬಿ ಜೀವನಕ್ಕೆ ನೆರವಾಗುತ್ತಿದೆ. ಬೆಳ್ತಂಗಡಿ ತಾಲೂಕಿನ 56,347 ಗೃಹಲಕ್ಷ್ಮೀಯರ ಖಾತೆಗಳಿಗೆ ಇದುವರೆಗೆ ಒಟ್ಟು ರೂ.340.31 ಕೋಟಿ ಹಣ ಜಮೆಯಾಗಿದೆ ಎಂದು ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ. ಪದ್ಮನಾಭ ಸಾಲ್ಯಾನ್ ತಿಳಿಸಿದ್ದಾರೆ.

ಕುಟುಂಬದ ಯಜಮಾನಿಯರ ಖಾತೆಗೆ ಪ್ರತೀ ತಿಂಗಳು ಜಮೆಯಾಗುವ ರೂ.2000 ಆರ್ಥಿಕವಾಗಿ ಮಹಿಳೆಯರಿಗೆ ಬಲ ನೀಡುವುದರೊಂದಿಗೆ ಸ್ವಾವಲಂಬಿ ಜೀವನಕ್ಕೆ ಮೈಲಿಗಲ್ಲಾಗಿದೆ. ಯೋಜನೆಯ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಮುಂದಿನ ವಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಅಭಿಯಾನ ಆರಂಭವಾಗಲಿದ್ದು, ಬಯೋಮೆಟ್ರಿಕ್ ಹಾಗೂ ಮುಖಚಹರೆ ಆಧಾರಿತ ನವೀಕರಣ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಗೃಹಲಕ್ಷ್ಮೀಯರ ಪ್ರತಿ ಮನೆಗೂ ಗ್ಯಾರಂಟಿ ಸಮಿತಿ ಸದಸ್ಯರು ಭೇಟಿ ನೀಡಿ, ಅಗತ್ಯ ಮಾಹಿತಿ ಪಡೆದು ನೊಂದಾಯಿಸುವ ಕಾರ್ಯ ನಡೆಸಲಿದ್ದಾರೆ ಎಂದು ಪದ್ಮನಾಭ ಸಾಲ್ಯಾನ್ ತಿಳಿಸಿದರು.

Related posts

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya
error: Content is protected !!