26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೊರಸಂಪನ್ಮೂಲ ನೌಕರರಿಂದ ರಕ್ಷಿತ್ ಶಿವರಾಂ ರವರಿಗೆ ಮನವಿ

ಬೆಳ್ತಂಗಡಿ: ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರ ಕನಿಷ್ಠ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಕೆಪಿಸಿಸಿ ಕರ್ನಾಟಕ ರಾಜ್ಯ ಕಾರ್ಯದಲ್ಲಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ರಾಜ್ಯದ ಕಾರ್ಮಿಕ ಇಲಾಖೆಯು ಕಾರ್ಮಿಕರ ಕನಿಷ್ಠ ವೇತನ ಕಾಯ್ದೆ 1948 ರ ಕಾಯಿದೆಯಡಿ ಕನಿಷ್ಠ ವೇತನ ಜಾರಿಗೊಳಿಸಲು ಆದೇಶಿಸಲಾಗಿತ್ತು. ಆದರಂತೆ ಜೂನ್ , ಜುಲೈ ತಿಂಗಳ ವೇತನ ಕೂಡ ಪಾವತಿಯಾಗಿತ್ತು. ಆದರೆ ಇದೀಗ ಏಕಾಏಕಿ ರಾಜ್ಯದ ಆರ್ಥಿಕ ಇಲಾಖೆ ಕನಿಷ್ಠ ವೇತನ ಪರಿಷ್ಕರಣೆಯನ್ನು ತಡೆಹಿಡಿಯುವ ಮೂಲಕ ಹೊರಸಂಪನ್ಮಲ ನೌಕರರಿಗೆ ಅನ್ಯಾಯ ಎಸಗಲಾಗಿದೆ‌. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದು , ತಡೆ ಹಿಡಿದಿರುವ ಕನಿಷ್ಠ ವೇತನವನ್ನು ಮರು ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಉಪಸ್ಥಿತರಿದ್ದರು.

Related posts

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!