26.2 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ

ಮಡಂತ್ಯಾರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಶ್ರಯದಲ್ಲಿ ಸೆಪ್ಟೆಂಬರ್ 1ರಿಂದ ಮೈಸೂರಿನಲ್ಲಿ ಆರಂಭಗೊಳ್ಳಲಿರುವ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಡಾ. ಕ್ಯಾಪ್ಟನ್ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ಋಷಿ ಬಿ. ಶೆಟ್ಟಿ ಅವರು ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ರಣಜಿ ಟ್ರೋಫಿ ಹಾಗೂ ಉನ್ನತ ಮಟ್ಟದ ಕ್ರಿಕೆಟ್ ಆಟಗಾರರು ಭಾಗವಹಿಸಲಿರುವ ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಋಷಿ ಅವರು ಕೆಎಸ್‌ಸಿಎ ಇಲೆವೆನ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ರಾಷ್ಟ್ರೀಯ ಮಟ್ಟದ ಈ ಪ್ರತಿಷ್ಠಿತ ಪಂದ್ಯಾವಳಿಗೆ ಆಯ್ಕೆಯಾಗಿರುವುದು ಋಷಿ ಅವರ ಕ್ರಿಕೆಟ್ ಪ್ರತಿಭೆ, ನಿರಂತರ ಪರಿಶ್ರಮ ಹಾಗೂ ಸಾಧನೆಗೆ ದೊರೆತ ಮಹತ್ವದ ಮಾನ್ಯತೆಯಾಗಿದ್ದು, ಸೇಕ್ರೆಡ್ ಹಾರ್ಟ್ ಕಾಲೇಜು, ಅವರ ಕುಟುಂಬ ಹಾಗೂ ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ.

ಬಲಗೈ ಬ್ಯಾಟ್ಸ್‌ಮನ್ ಹಾಗೂ ವಿಕೆಟ್ ಕೀಪರ್ ಆಗಿರುವ ಋಷಿ ಬಿ. ಶೆಟ್ಟಿ ಅವರು ತಮ್ಮ ಕ್ರಿಕೆಟ್ ಜೀವನದಲ್ಲಿ ಹಲವು ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಪುರುಷರ ಕ್ರಿಕೆಟ್ ತಂಡವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದು, ಎರಡು ವರ್ಷಗಳ ಕಾಲ ತಂಡದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ತಂಡವನ್ನು ಮುನ್ನಡೆಸಿರುವ ಅನುಭವವು ಅವರ ನಾಯಕತ್ವದ ಸಾಮರ್ಥ್ಯ, ಆತ್ಮವಿಶ್ವಾಸ ಹಾಗೂ ಕ್ರೀಡಾ ಮನೋಭಾವಕ್ಕೆ ಸಾಕ್ಷಿಯಾಗಿದೆ.

ಇದರೊಂದಿಗೆ ಋಷಿ ಅವರು ಕೆಎಸ್‌ಸಿಎ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಆಡಿರುವ ಅನುಭವ ಹೊಂದಿದ್ದು, ಕೆಎಸ್‌ಸಿಎ ಅಂತರ ವಲಯ ಪಂದ್ಯಾವಳಿಗಳಲ್ಲಿಯೂ ಭಾಗವಹಿಸಿದ್ದಾರೆ. 14, 16, 19 ಹಾಗೂ 23 ವರ್ಷ ವಯೋಮಿತಿಯ ವಿವಿಧ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸಿರುವ ಅವರು, ಹಲವು ಸಂದರ್ಭಗಳಲ್ಲಿ ತಂಡದ ನಾಯಕತ್ವದ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮುಲ್ಕಿ ದಯಾನಂದ ಕಾಮತ್ ಸ್ಮಾರಕ ಮಂಗಳೂರು ವಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ತಂಡವು ಸತತ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಾಧನೆ ಮಾಡಿದೆ. ಈ ನಾಲ್ಕೂ ವರ್ಷಗಳ ತಂಡದ ಯಶಸ್ಸಿನಲ್ಲಿ ಋಷಿ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದು, ತಂಡದ ಗೆಲುವಿನ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.

Related posts

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya
error: Content is protected !!