26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಚಾಲನೆ

ಉಜಿರೆ: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ಸ್ಪರ್ಧಾ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ಹಾಗೂ ಐಕ್ಸ್ (AICS) ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ. ಶಾಲೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಅಂಡರ್-17 ವಯೋಮಾನದ ಸೀನಿಯರ್ ವಿಭಾಗದ ‘ಎಸ್.ಡಿ.ಎಂ. ಫ್ಲೈ ಹೈ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಆ.31ರಂದು ಚಾಲನೆ ನೀಡಲಾಯಿತು.

ಉಜಿರೆಯ ಎಸ್.ಡಿ.ಎಂ. ಪದವಿ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾ ಕಾರ್ಯದರ್ಶಿ ಶ್ರೀ ರಮೇಶ್ ಎಚ್. ಅವರು ದೀಪ ಪ್ರಜ್ವಲಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭಹಾರೈಸಿದರು.

ಅಂಡರ್-17 ವಯೋಮಾನದ ಸೀನಿಯರ್ ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳ ಒಟ್ಟು 37 ತಂಡಗಳು ಉತ್ಸಾಹದಿಂದ ಭಾಗವಹಿಸಿದವು. ಕ್ರೀಡಾಪಟುಗಳು ಉತ್ತಮ ಕ್ರೀಡಾ ಪ್ರತಿಭೆ, ಶಿಸ್ತು ಹಾಗೂ ಕ್ರೀಡಾ ಸ್ಫೂರ್ತಿಯನ್ನು ಪ್ರದರ್ಶಿಸುವ ಮೂಲಕ ಪಂದ್ಯಾವಳಿಗೆ ಮೆರುಗು ತಂದರು.

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಸಾತ್ವಿಕ್ ಜೈನ್ ಅವರು ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಶುಭಹಾರೈಸಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ಕ್ರೀಡಾ ಸ್ಫೂರ್ತಿ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ‘Smash Your Limits, Fly High!’ ಎಂಬ ಆಶಯದೊಂದಿಗೆ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್ ವಿದ್ಯಾರ್ಥಿಗಳಿಗೆ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಕ್ರೀಡಾ ಶಿಕ್ಷಣ ಶಿಕ್ಷಕರಾದ ಸಂತೋಷ್ ಹಾಗೂ ಶಿಕ್ಷಕಿ ಶ್ರೀಮತಿ ಪೌಲಿನ್ ಅವರು ಪಂದ್ಯಾವಳಿಯ ಸಂಯೋಜನೆ ವಹಿಸಿದ್ದರು. ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ: ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ ಗೆ ಗಣ್ಯರ ಭೇಟಿ

Suddi Udaya
error: Content is protected !!