26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

ಬೆಳ್ತಂಗಡಿ: ಮಹಿಳೆಯ ಮಾನಭಂಗ ಯತ್ನ ಪ್ರಕರಣದಲ್ಲಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಿಂದ ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ: 172/2014ರಲ್ಲಿ ಕಲಂ 354(B), 323, 324, 504 ಹಾಗೂ 506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ @ ಆಂಟೋನಿ (56) ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ ಹಾಗೂ ಪಿಸಿ ಮನು ನಾಯ್ಕ ಅವರು ಆ. 29 ರಂದು ಕೇರಳ ರಾಜ್ಯದ ಕಣ್ಣೂರಿನಲ್ಲಿ ಆರೋಪಿಯನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಕ್ರೀಡಾಕೂಟ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!