27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ: ಶ್ರೀವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ ಟ್ರಸ್ಟ್ ಬೆಳ್ತಂಗಡಿ ಪ್ರಗತಿ ಬಂಧು- ಜ್ಞಾನ ವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ನ್ಯಾಯತರ್ಪು,ಕಳಿಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಆ.28 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ರಣ್ಣ ಅವರ ಪೌರೋಹಿತ್ಯ ದಲ್ಲಿ ಜರಗಿತು.

ನ್ಯಾಯತರ್ಪು, ಕಳಿಯ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ರಾದ ಸಂಧ್ಯಾ ಸುರೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮುಂಡಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯಾತ್ರಿ ಪಿ.ಧಾರ್ಮಿಕ ಉಪನ್ಯಾಸ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಗುರುವಾಯನಕೆರೆ ಯೋಜನಾಧಿಕಾರಿ ಹರೀಶ್ ,
ನಾಳ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಬಿ. ಉಪಸ್ಥಿತರಿದ್ದರು.

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ನಿಕಟ ಪೂರ್ವ ಅಧ್ಯಕ್ಷೆ ಪುಷ್ಪ ಉದಯ, ಉಪಾಧ್ಯಕ್ಷೆ ವಿನೋದ, ಕಾರ್ಯದರ್ಶಿ ರಾಜೀವಿ ಪದ್ಮನಾಭ, ಜತೆ ಕಾರ್ಯದರ್ಶಿ ಸುಮಿತ್ರಾ ಸುರೇಶ್, ಕೋಶಾಧಿಕಾರಿ ಅನುಪಮಾ ಸತೀಶ್, ಕಳಿಯ ಒಕ್ಕೂಟದ ಪ್ರತಿನಿಧಿ ಸೌಮ್ಯ ,ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷ ಸಿದ್ದಪ್ಪ ಗೌಡ ಹಾಗೂ ಪ್ರಗತಿಬಂಧು, ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ರವಿ ಜಿ. ಸ್ವಾಗತಿಸಿದರು. ನಾಳ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ ವಂದಿಸಿದರು.

Related posts

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
error: Content is protected !!