26.2 C
ಪುತ್ತೂರು, ಬೆಳ್ತಂಗಡಿ
October 17, 2026
Uncategorized

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.
ಈ ಅಪಾಯಕಾರಿ ಗುಂಡಿಯನ್ನು ಮುಚ್ಚುವಂತೆ ಮತ್ತು ದುರಸ್ತಿಪಡಿಸುವ ಬಗ್ಗೆ ತಾಲೂಕು ಪಂಚಾಯತ್ ಕೆಡಿಪಿ ಸದಸ್ಯ ಹಾಗೂ ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಡಿ. ಜಗದೀಶ್‌ ಅವರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಆಡಳಿತಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು. ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ಜಗದೀಶ್ ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಅನಿಸಿಕೆ ವ್ಯಕ್ತಪಡಿಸಿ ದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya
error: Content is protected !!