25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

ಬೆಳ್ತಂಗಡಿ: ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಆ. 26ರಂದು ಸಾಂತ್ವನಂ ಕುವೈತ್ ಸಹಯೋಗದಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಓಣಂ ಪ್ರಯುಕ್ತ ಆಶ್ರಮದ ಆವರಣದಲ್ಲಿ ಸುಂದರವಾದ ಪೂಕಳಂ ರಚಿಸಲಾಗಿತ್ತು.

ಕಾರ್ಯಕ್ರಮವನ್ನು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಸಂತ್ ಕುಮಾರ್ ಶೆಟ್ಟಿ, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್, ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ವೈದ್ಯಾಧಿಕಾರಿ ಡಾ. ಕಲಾಮಧು ಶೆಟ್ಟಿ ಹಾಗೂ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಸಂತ್ ಕುಮಾರ್ ಶೆಟ್ಟಿ ಅವರು ಓಣಂ ಹಬ್ಬದ ಮಹತ್ವವನ್ನು ವಿವರಿಸಿ ಶುಭಾಶಯಗಳನ್ನು ಕೋರಿದರು.

ಪ್ರಸನ್ನ ನರ್ಸಿಂಗ್ ಕಾಲೇಜು, ಬೆಳ್ತಂಗಡಿಯ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಆಶ್ರಮದ ನಿವಾಸಿಗಳಲ್ಲಿ ಮತ್ತಷ್ಟು ಸಂತಸ ಮೂಡಿಸಿದರು. ಅವರ ಮನರಂಜನಾ ಕಾರ್ಯಕ್ರಮವು ಓಣಂ ಆಚರಣೆಗೆ ವಿಶೇಷ ಮೆರುಗು ನೀಡಿತು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಓಣಂ ಸದ್ಯವನ್ನು ಸಾಂತ್ವನಂ ಕುವೈತ್ ಪ್ರಾಯೋಜಿಸಿತು. ಆಶ್ರಮದ ನಿವಾಸಿಗಳು, ಸಿಬ್ಬಂದಿ, ಟ್ರಸ್ಟಿಗಳು, ಕುಟುಂಬಸ್ಥರು ಹಾಗೂ ಹಿತೈಷಿಗಳು ಭಾಗವಹಿಸಿ ಹಬ್ಬವನ್ನು ಸಡಗರದಿಂದ ಆಚರಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!