25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 1ರಂದು ‘Career in Armed Forces’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾರತೀಯ ವಾಯುಪಡೆಯ 104 ಹೆಲಿಕಾಪ್ಟರ್ ಸ್ಕ್ವಾಡ್ರನ್, ಶ್ರೀ ಗಂಗಾನಗರ, ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಪೊರಲ್ ಜಯಪ್ರಕಾಶ್ ಕೆ. ಹಾಗೂ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಸಹಾಯಕ ಶಿಕ್ಷಕ ದೀಕ್ಷಿತ್ ಎಂ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಲಭ್ಯವಿರುವ ವೃತ್ತಿ ಅವಕಾಶಗಳು, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ, ಅರ್ಹತೆ, ಆಯ್ಕೆ ವಿಧಾನ, ಶಾಶ್ವತ ಕೇಡರ್‌ಗೆ ಆಯ್ಕೆಯಾಗುವ ಅವಕಾಶಗಳು, ವೇತನ, ಸೌಲಭ್ಯಗಳು ಹಾಗೂ ಸೇವೆಯಿಂದ ದೊರೆಯುವ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.


ವಾಣಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಕಾರ್ಪೊರಲ್ ಜಯಪ್ರಕಾಶ್ ಕೆ. ಅವರು ತಮ್ಮ ಸೈನಿಕ ಸೇವೆಯ ಅನುಭವಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ದೇಶಸೇವೆಯ ಮನೋಭಾವದೊಂದಿಗೆ ಸಶಸ್ತ್ರ ಪಡೆಗಳಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರೇರೇಪಿಸಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ವಾಣಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಪೊರಲ್ ಜಯಪ್ರಕಾಶ್ ಕೆ. ಅವರನ್ನು ಕಾಲೇಜಿನ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಅವರ ಸೇವೆ ಹಾಗೂ ಸಾಧನೆಯನ್ನು ಅಭಿನಂದಿಸಿ, ವಿದ್ಯಾರ್ಥಿಗಳಿಗೆ ಅವರು ಪ್ರೇರಣೆಯ ಚಿಲುಮೆಯಾಗಿದ್ದಾರೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಂಖ್ಯಾಶಾಸ್ತ್ರ ಉಪನ್ಯಾಸಕ ಸುರೇಂದ್ರ ಸ್ವಾಗತಿಸಿದರು. ಗಣಕ ವಿಜ್ಞಾನ ಉಪನ್ಯಾಸಕ ಸುಧೀರ್ ಕೆ.ಎನ್. ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ. ವಂದಿಸಿದರು.

Related posts

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya
error: Content is protected !!