24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ:ವಿವಿಧ ಸ್ಪರ್ಧೆಗಳಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು: ಕರಾಟೆಯಲ್ಲಿ ವರ್ಣಿಕ ರಾಷ್ಟ್ರಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ ವಿದ್ಯಾರ್ಥಿಗಳು ವಿವಿಧ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ವರ್ಣಿಕ ಎಚ್. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅವರು ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

ವರ್ಣಿಕ ಅವರು ಮಂಡ್ಯದ ಹರೀಶ್ ಯು.ಎಸ್. ಮತ್ತು ಸವಿತಾ ಆರ್. ದಂಪತಿಯ ಪುತ್ರಿ.

ಆದ್ಯ ಎಸ್.ವಿ. ಅವರು ಪುತ್ತೂರಿನಲ್ಲಿ ನಡೆದ ಜಿಲ್ಲಾಮಟ್ಟದ ಗಣಿತ ವಿಜ್ಞಾನ ಮೇಳದಲ್ಲಿ ಭಾಗವಹಿಸಿ, ‘ಪ್ರಾಪರ್ಟೀಸ್ ಆಫ್ ರೆಗ್ಯುಲರ್ ಪಾಲಿಗನ್ಸ್’ ಮಾದರಿ ಪ್ರದರ್ಶನದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಅವರು ವಳಂಬ್ರದ ಸುಧೀರ್ ಯು. ಮತ್ತು ರೀನಾ ದಂಪತಿಯ ಪುತ್ರಿ.

ಹನಿಷ್ಕಾ ಯು. ಅವರು ಪುತ್ತೂರಿನಲ್ಲಿ ನಡೆದ ಜಿಲ್ಲಾಮಟ್ಟದ ಗಣಿತ ವಿಜ್ಞಾನ ಮೇಳದ ಸೈನ್ಸ್ ಪೇಪರ್ ಪ್ರೆಸೆಂಟೇಶನ್‌ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾರೆ. ಅವರು ಕಲ್ಲೇರಿಯ ಉಮೇಶ್ ಸಾಲ್ಯಾನ್ ಮತ್ತು ಜ್ಯೋತಿ ದಂಪತಿಯ ಪುತ್ರಿ.

ಗ್ರಹಿತ ಆರ್. ಶೆಟ್ಟಿ ಅವರು ಸುರತ್ಕಲ್‌ನಲ್ಲಿ ನಡೆದ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ, ಇಂಡಿವಿಜುವಲ್ ಕಾಟಾ ಹಾಗೂ ಇಂಡಿವಿಜುವಲ್ ಕುಮಿಟೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರು ರಾಜೀವ್ ಎನ್. ಶೆಟ್ಟಿ ಮತ್ತು ಶಕುಂತಲಾ ಶೆಟ್ಟಿ ದಂಪತಿಯ ಪುತ್ರಿ.

ವಿದ್ಯಾರ್ಥಿಗಳ ಸಾಧನೆ ಕುರಿತು ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪ್ರಾಂಶುಪಾಲರಾದ ಸುಮಿತ್ರಾ ಗೌಡ ಮಾತನಾಡಿ‌ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಹಾಗೂ ತರಬೇತಿ ನೀಡುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ. ಎಕ್ಸೆಲ್ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡೆ ಹಾಗೂ ವಿವಿಧ ಸ್ಪರ್ಧೆಗಳಲ್ಲೂ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳ ಪ್ರತಿಭೆಗೆ ಅಗತ್ಯ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳ ಸಾಧನೆಗೆ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್ ಕಜೆ, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಪುನರ್ವಸು 2.0 – ಇಂದ್ರಿಯ ಆರೋಗ್ಯವನ್ನು ಮುನ್ನೆಲೆಗೆ ತರುವ ಅಂತಾರಾಷ್ಟ್ರೀಯ ಆಯುರ್ವೇದ ಸಮ್ಮೇಳನ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya
error: Content is protected !!