23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ವಿಜ್ಞಾನವನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಗಂಡಿಬಾಗಿಲಿನ ವಿಶೇಷ ಚೇತನರ ನೆಲೆಯಾಗಿರುವ ಸಿಯೋನ್ ಆಶ್ರಮದಲ್ಲಿ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ಹಾಗೂ ವಿಶೇಷ ಚೇತನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಮತ್ತು ಪ್ರಾಯೋಗಿಕ ವಿಜ್ಞಾನದ ಅನುಭವವನ್ನು ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದ ವಿವಿಧ ಪ್ರಯೋಗಗಳು ಮತ್ತು ಮಾದರಿಗಳನ್ನು ಪ್ರದರ್ಶಿಸಲಾಯಿತು. ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳರಚನೆ, ಸಸ್ಯಗಳಲ್ಲಿನ ಬಾಷ್ಪೀಕರಣ ಕ್ರಿಯೆ, ಎಲೆಗಳಲ್ಲಿ ಕಂಡುಬರುವ ವಿವಿಧ ವರ್ಣದ್ರವ್ಯಗಳು ಹಾಗೂ ಸಸ್ಯಗಳು ಆಮ್ಲಜನಕವನ್ನು ಬಿಡುಗಡೆ ಮಾಡುವ ಪ್ರಕ್ರಿಯೆಗಳನ್ನು ಸರಳ ಮತ್ತು ಮನಮುಟ್ಟುವ ರೀತಿಯಲ್ಲಿ ವಿವರಿಸಲಾಯಿತು.

ಪ್ರಾಯೋಗಿಕ ಪ್ರದರ್ಶನಗಳು ವಿಶೇಷ ಚೇತನರಲ್ಲಿ ಅಪಾರ ಕುತೂಹಲ ಮೂಡಿಸಿದ್ದು, ಅವರು ಉತ್ಸಾಹದಿಂದ ಭಾಗವಹಿಸಿ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದರು. ವಿಜ್ಞಾನವನ್ನು ನೇರವಾಗಿ ಅನುಭವಿಸುವ ಅವಕಾಶವು ಅವರಿಗೆ ಹೊಸ ಕಲಿಕೆಯ ಅನುಭವವನ್ನು ನೀಡಿತು. ಕಾರ್ಯಕ್ರಮವು ವಿಜ್ಞಾನ ಮತ್ತು ಸಮಾಜದ ನಡುವೆ ಅರ್ಥಪೂರ್ಣ ಸೇತುವೆಯಾಗಿ ಕಾರ್ಯನಿರ್ವಹಿಸಿತು.

ಸಿಯೋನ್ ಆಶ್ರಮದ ಯು. ಸಿ. ಪೌಲೋಸ್ ಅವರ ಪ್ರೋತ್ಸಾಹ ಮತ್ತು ಸಂಪೂರ್ಣ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಆಶ್ರಮದ ಸಿಬ್ಬಂದಿಗಳಾದ ರಿತೇಶ್ ಹಾಗೂ ಶ್ರದ್ಧಾ ಅವರು ಕಾರ್ಯಕ್ರಮದ ಸುಸೂತ್ರ ಆಯೋಜನೆಗೆ ಅಮೂಲ್ಯ ಸಹಕಾರ ನೀಡಿದರು.

ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಭಿಲಾಷ್ ಕೆ. ಎಸ್. ಹಾಗೂ ಸಹಾಯಕ ಪ್ರಾಧ್ಯಾಪಕಿ ಮಂಜುಶ್ರೀ ಕೆ. ಕಾರ್ಯಕ್ರಯ ಸಂಯೋಜಿಸಿದರು. ವಿಭಾಗದ ವಿದ್ಯಾರ್ಥಿನಿಯರಾದ ಅನ್ವಿಟಾ ಸೆರಾ, ಅರ್ಚನಾ ಹಾಗೂ ಅಲಕ ಅವರು ಪ್ರಾಯೋಗಿಕ ಪ್ರದರ್ಶನಗಳನ್ನು ನಡೆಸಿಕೊಟ್ಟು ಕಾರ್ಯಕ್ರಮದ ಯಶಸ್ಸಿಗೆ ಸಕ್ರಿಯವಾಗಿ ಕೈಜೋಡಿಸಿದರು.

Related posts

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!