32.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ
ಪಂದ್ಯಾಟದಲ್ಲಿ ಅಂಡರ್–14 ಬಾಲಕಿಯರ ತಂಡವು ವಿಜೇತರಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಅಂಡರ್–17 ಬಾಲಕರ ತಂಡವು ರನ್ರ‍್ಸ್ಅಪ್ ಸ್ಥಾನ ಪಡೆದು ಉತ್ತಮ ಪ್ರದರ್ಶನ ನೀಡಿತು.

ವೈಯಕ್ತಿಕ ವಿಭಾಗದಲ್ಲಿಯೂ ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳು ಮಿಂಚಿದರು. ಅತ್ಯುತ್ತಮ ಶೂಟರ್ ಪ್ರಶಸ್ತಿಯನ್ನು ದೀಕ್ಷಿತ್ ಹಾಗೂ ಏಂಜಲ್ ಜಾಸ್ಮಿನ್ ಪಿಂಟೋ ಪಡೆದುಕೊಂಡರೆ, ಅತ್ಯುತ್ತಮ ಗೋಲ್ಕೀಪರ್ ಪ್ರಶಸ್ತಿಯನ್ನು ಸಾನ್ವಿಕಾ ಕೆ.ಪಿ. ತಮ್ಮದಾಗಿಸಿಕೊಂಡರು.

ವಿದ್ಯಾರ್ಥಿಗಳ ಈ ಸಾಧನೆಗೆ ಸಂತ ತೆರೇಸಾ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಸಂಸ್ಥೆಯ ಪ್ರಯತ್ನಕ್ಕೆ ಈ ಸಾಧನೆ ಮತ್ತಷ್ಟು ಮೆರುಗು ತಂದಿದೆ.

Related posts

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್

Suddi Udaya
error: Content is protected !!