32.3 C
ಪುತ್ತೂರು, ಬೆಳ್ತಂಗಡಿ
October 18, 2026
Uncategorized

ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹೈಕೋರ್ಟ್ ನಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲುಮನವಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿ 3639/2007 ಹಾಗೂ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ಸದಸ್ಯ , ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ಶತಮಾನಗಳಿಂದ ವಾಸಿಸುತ್ತಿದ್ದಾರೆ. ಈ ಕುಟುಂಬಗಳ ಪೈಕಿ 37 ಕುಟುಂಬಗಳಿಗೆ ಭೂನ್ಯಾಯ ಮಂಡಳಿಯಿಂದ ಭೂಸುಧಾರಣಾ ಕಾಯ್ದೆಯಂತೆ ಜಮೀನು ಮಂಜೂರುಗೊಂಡಿತ್ತು. ಈ ಜಮೀನನ್ನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ 3639/2007 ಸಲ್ಲಿಸಲಾಗಿದೆ. ಇದಲ್ಲದೆ ಇದೇ ಜಮೀನಿನ ಮೇಲೆ ಇತರೆ ಪ್ರಕರಣಗಳನ್ನು ದಾಖಲಿಸಲಾಗಿದ್ದು , ಇದರಿಂದಾಗಿ ಬಾಂಜಾರು ಮಲೆಕುಡಿಯ ಕಾಲೋನಿಯ ಕುಟುಂಬಗಳು ತೀವ್ರ ತೊಂದರೆ ಉಂಟಾಗಿದೆ. ಪ್ರತಿ ಕುಟುಂಬಗಳು 4 ರಿಂದ 6 ಎಕರೆ ತನಕವೂ ಜಮೀನು ಹೊಂದಿದ್ದು , ಮನೆ ನಿರ್ಮಾಣ ಮಾಡಿ , ಕೃಷಿ ಕೃತಾವಳಿಗಳನ್ನು ಬರುತ್ತಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳಲ್ಲಿ ತಮ್ಮ ಜಮೀನನ್ನು ಕಳೆದುಕೊಳ್ಳುವ ಭೀತಿ ಉಂಟಾಗಿದ್ದು , ರಾಜ್ಯ ಸರ್ಕಾರ ತಕ್ಷಣ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹಾಕಿರುವ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವ ಐತಿಹಾಸಿಕ ತೀರ್ಮಾನವನ್ನು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಅಗತ್ಯವಿದೆ ಎಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.

Related posts

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya
error: Content is protected !!