24.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಕೆಸರ್ದ ಕಂಡೊಡು ಕುಶಲ್ದ ಗೊಬ್ಬುಲು

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ ರೋವರ್ ರೇಂಜರ್ಸ್ ಘಟಕ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘಗಳ ಸಹಯೋಗದಲ್ಲಿ ಬೆಳ್ತಂಗಡಿ ಜೈನ್ ಪೇಟೆಯ ದೊಡ್ಡಮನೆ ಗದ್ದೆಯಲ್ಲಿ ಕೆಸರ್ದ ಕಂಡೊಡು ಕುಶಲ್ದ ಗೊಬ್ಬುಲು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಇವರನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸತೀಶ್ ಶೆಟ್ಟಿ ನೆರೆವೇರಿಸಿದರು.‌ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಕೆ ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಸೊಗಡನ್ನು ಮೂಡಿಸುವಲ್ಲಿ ಈ ರೀತಿಯ ಕಾರ್ಯಕ್ರಮಗಳು ಆಯೋಜನೆಗೊಳ್ಳಬೇಕು ಎಂದು ತಿಳಿಸಿದರು ಹಾಗೂ ಮೇಜರ್ ಧ್ಯಾನ್ ಚಂದ್ ರವರ ಜೀವನ ನಮಗೆಲ್ಲರಿಗೂ ಪ್ರೇರಣೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಮ್ ಎನ್, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಪ್ರೊ. ರೆನಾಲ್ಡ್ ಪ್ರವೀಣ್ ಕೊರಾಯ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಡಾ.ಸಮನ್ ಶೆಟ್ಟಿ ಎನ್, ಡಾ. ಕುಶಾಲಪ್ಪ ಎಸ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ ಇವರು ಉಪಸ್ಥಿತರಿದ್ದರು. ದ್ವಿತೀಯ ಬಿಕಾಂ ನ ಕುಮಾರಿ ಅನನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಅಂತಿಮ ಬಿ.ಎ. ಕೃತಿಕ್ ಸ್ವಾಗತಿಸಿ, ದ್ವಿತೀಯ ಬಿಬಿಎ ರಕ್ಷಿತ್ ವಂದಿಸಿದರು. ಅಂತಿಮ ಬಿಬಿಎ ಕುಮಾರಿ ತೇಜಾಕ್ಷಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಕ್ರೀಡೆಗಳನ್ನು ಆಯೋಜಿಸಲಾಯಿತು.

Related posts

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya
error: Content is protected !!