24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಸೆ. 5ರಂದು ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಕಾರ್ಯವ್ಯಾಪ್ತಿಯನ್ನಾಗಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ.

ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 5ರಂದು ನಡೆಯಲಿದ್ದು, ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಹಾಗೂ ‘ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಭಗೀರಥ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು ಹಾಗೂ ಈ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಜಿ. ಜಗದೀಶ್, ಐಎಎಸ್ ಅವರಿಗೆ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದ ಹಾಸ್ಯ ಕಲಾವಿದ ಸುಂದರ ಬಂಗಾಡಿ, ಸ್ನೇಹದೀಪ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಸ್ಥಾಪಕಿ ತಬಸ್ಸುಮ್, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕು. ದಿಶಾ ಪೂಜಾರಿ ಹಾಗೂ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಕು. ಧನಲಕ್ಷ್ಮೀ ಪೂಜಾರಿ ಅವರಿಗೆ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.

ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
error: Content is protected !!