September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಗುರುವಾರ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ವಿಷಯ “ಸ್ವಚ್ಛ ಪರಿಸರ, ಆರೋಗ್ಯಕರ ಜೀವನ” ಎಂಬುದಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ರೆವರೆಂಡ್ ಫಾದರ್ ಡಾ. ವಿಜಯ ಲೋಬೋ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಜಿಲ್ಲಾ ಮಾಹಿತಿ, ಶಿಕ್ಷಣ ಮತ್ತು ಸಂವಹನ ತಜ್ಞರು ಡೊಂಬಯ್ಯ ಇಡ್ಕಿದು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಸ್ವಚ್ಛತೆ, ವೈಯಕ್ತಿಕ ನೈರ್ಮಲ್ಯ, ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವುದು ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಉತ್ತಮ ಸ್ವಚ್ಛತಾ ಅಭ್ಯಾಸಗಳನ್ನು ಬೆಳೆಸಿಕೊಂಡು ತಮ್ಮ ಶಾಲೆ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಪ್ರೇರೇಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವೂ ನಡೆಯಿತು.

ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ವರ್ಷ ಪಿ. ಆರ್ ಸ್ವಾಗತ ಭಾಷಣ ಮಾಡಿದರು.  ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಕೀರ್ತಿ ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ರಮೇಶ್ ಅವರು ವಂದನಾರ್ಪಣೆ ಮಾಡಿದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ  ವಿನಿಷ ಕಾರ್ಯಕ್ರಮದ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಉತ್ತಮ ಜಾಗೃತಿಯನ್ನು ಮೂಡಿಸಲಾಯಿತು.

Related posts

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!