23.8 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಆಶ್ರಯದಲ್ಲಿ ಇಂದು ಸುಳ್ಯದಲ್ಲಿ ನಡೆದ 14 ಮತ್ತು 17 ವಯೋಮಿತಿಯ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನುಗ್ರಹ ಇಂಗ್ಲಿಷ್ ಮೀಡಿಯಂ ಸ್ಕೂಲ್, ಉಜಿರೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸ್ಪರ್ಧೆಯಲ್ಲಿ ಅನುಗ್ರಹ ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಶಫೀಕ್, ಸ್ಟೀವನ್ ಲೋಬೊ, ಪ್ರಮೀತ್ ಹಾಗೂ ವಿಶ್ವಾಸ್ ಶೆಟ್ಟಿ ಅವರು ತಮ್ಮ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಅದೇ ರೀತಿ, ವಿದ್ಯಾರ್ಥಿಗಳಾದ ಸೌರವ್ ಹಾಗೂ ಅಮೋಘ್ ಆರ್. ಶೆಟ್ಟಿ ಅವರು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Related posts

ಶಿರ್ಲಾಲು :ಬಗ್ಯೋಟ್ಟು ಕಜೆಯಲ್ಲಿ ದುರಂತ, ಬಾವಿಗೆ ಬಿದ್ದು ಅವಿವಾಹಿತ ವ್ಯಕ್ತಿ ರವಿ ಆಚಾರ್ಯ ಸಾವು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!