September 3, 2026
ಗ್ರಾಮಾಂತರ ಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸೆ.03. ತಾಲೂಕಿನ ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ DA-JGUA ಯೋಜನೆಯಡಿ ಒಟ್ಟು ರೂ.3 ಕೋಟಿ 25 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಇದೇ ಶಾಲಾ ಆವರಣದಲ್ಲಿ ಈಗಾಗಲೇ ವಿದ್ಯಾರ್ಥಿಗಳ ವಸತಿ ಸೌಲಭ್ಯವನ್ನು ಹೆಚ್ಚಿಸುವ ಉದ್ದೇಶದಿಂದ ರೂ.2.00 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ವಸತಿ ನಿಲಯ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಸ್ತುತ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯವನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಶಾಲೆಯಲ್ಲಿ 7 ನೂತನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ರೂ.2 ಕೋಟಿ 45 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಮೂಲಭೂತ ಸೌಲಭ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಹುಡುಗಿಯರಿಗೆ 2 ಬ್ಲಾಕ್ ಹಾಗೂ ಹುಡುಗರಿಗೆ 2 ಬ್ಲಾಕ್ ಸೇರಿದಂತೆ ಒಟ್ಟು 4 ಬ್ಲಾಕ್ ಶೌಚಾಲಯಗಳ ನಿರ್ಮಾಣಕ್ಕೆ ರೂ.80 ಲಕ್ಷ ಅನುದಾನ ಒದಗಿಸಲಾಗಿದೆ. ಈ ಉದ್ದೇಶಿತ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಎಲ್ಲಾ ಕಾಮಗಾರಿಗಳಿಂದ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸೌಲಭ್ಯಗಳು ದೊರೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಈ ಮಹತ್ವದ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಅನುದಾನ ಒದಗಿಸಿದ ಕೇಂದ್ರ ಸರಕಾರಕ್ಕೆ ಹಾಗೂ ಅನುದಾನ ಮಂಜೂರಾತಿಗೆ ಸಹಕಾರ ನೀಡಿದ ದಕ್ಷಿಣ ಕನ್ನಡ ಸಂಸದರಾದ ಸನ್ಮಾನ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಶಾಸಕ ಹರೀಶ್ ಪೂಂಜ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!