September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಗೌಡ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸವಣಾಲಿನ ನವೀನ್ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್‌.ಎಸ್. ಮಂಜುನಾಥ್ ಅವರು ನವೀನ್ ಗೌಡ ಅವರಿಗೆ ನೇಮಕಾತಿ ಆದೇಶವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ನವಾಜ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.

Related posts

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!