September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಾಲಾಡಿ  ಗ್ರಾಮ ಪಂಚಾಯತ್ 2026-2027ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆಡಳಿತಾಧಿಕಾರಿ ತಾ. ಪಂ. ಇಓ ಭವಾನಿಶಂಕರ್ ಎನ್ ಅಧ್ಯಕ್ಷತೆಯಲ್ಲಿ ನಡೆಯಿತು.  ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ನೋಡೆಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಸರ್ವೇ ಇಲಾಖೆಗಳಲ್ಲಿ ಯಾವುದೇ ಕಡತಗಳ ವೀಲೆ ಆಗುತ್ತಿಲ್ಲ ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ, ಪ್ಲಾಟಿಂಗ್ ಕೆಲಸವನ್ನು ಚುರುಕುಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ಬೆಳೆ ಸಮೀಕ್ಷೆ ಸಮರ್ಪಕವಾಗಿ ನಡೆಯಲಿ, ಸರ್ವೇ ನಂಬರ್ 30/1 ರಲ್ಲಿ ಪ್ಲಾಟಿಂಗ್ ಪ್ರಕ್ರಿಯೆಗೆ ಅರ್ಜಿ ನೀಡಿ 15 ವರ್ಷ ಕಳೆದರೂ ಅರಣ್ಯ ಇಲಾಖೆಯ ತಕಾರರು ಮುಗಿಯುವುದಿಲ್ಲ ಇದರಿಂದ ಫಲಾನುಭವಿಗಳಿಗೆ ಸಂಕಷ್ಟ ಅನುಭವಿಸುತ್ತಿದ್ದಾರೆ, ಅರಣ್ಯ ಇಲಾಖೆ ಪ್ಲಾಟಿಂಗ್ ಪ್ರಕ್ರಿಯೆಗೆ ನ್ಯಾಯ ಓದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೇ ನಡೆಯಬೇಕು, ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಗ್ರಾಮಸ್ಥರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ರೈ  ಸ್ವಾಗತಿಸಿ ವರದಿ ವಾಚಿಸಿದರು.  ಕಾರ್ಯದರ್ಶಿ ನಾರಾಯಣ, ಸಿಬ್ಬಂದಿಗಳು ಸಹಕರಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya
error: Content is protected !!