27.7 C
ಪುತ್ತೂರು, ಬೆಳ್ತಂಗಡಿ
September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

ಬೆಳ್ತಂಗಡಿ: ಶತಮಾನಗಳಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವಿದ್ಯುತ್ ವಂಚಿತ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ಸೆ.1 ರಂದು ವನ್ಯಜೀವಿ ಮಂಡಳಿ ಅನುಮೋದನೆ ನೀಡಿದ್ದು, ರಾಜ್ಯದ ಇಂಧನ ಸಚಿವರಲ್ಲಿ ಅನುದಾನ ಮಂಜೂರಾತಿಗೆ ಮನವಿ ಮಾಡಿದ್ದೇವೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿದರು.

ಅವರು ಸೆ.4ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಬಂಧಿತ ಅಧಿಕಾರಿಗಳು ಮತ್ತು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ಪ್ರಯತ್ನದಿಂದ ಅನುಮತಿ ದೊರಕಿದ್ದು, ಸೆ.೨ ರಂದು ನಮ್ಮ ಸಂಘಟನೆಯ ನೇತೃತ್ವದಲ್ಲಿ ನಾವೂರು ಮತ್ತು ಕುತ್ಲೂರು ನಿವಾಸಿಗಳ ಜೊತೆ ರಾಜ್ಯದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿಯಾಗಿ ವಿದ್ಯುತ್ ಸಂಪರ್ಕಕ್ಕಾಗಿ ಅನುದಾನ ಮಂಜೂರು ಮಾಡಲು ವಿನಂತಿಸಿದ್ದೇವೆ. ಶಾಸಕರು ನಾನು ಮಾಡಿರುವುದು ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆದರೆ ಸತ್ಯ ಅಲ್ಲಿನ ಜನರಿಗೆ ಗೊತ್ತಿದೆ ಎಂದು ತಿಳಿಸಿದರು.

ಸುಮಾರು ಎರಡು ಶತಮಾನಗಳಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 9 ಗ್ರಾಮಗಳಲ್ಲಿ ಜನರು ತಮ್ಮ ಕುಟುಂಬ ಸಮೇತ ಕೃಷಿ ಕೃತಾವಳಿಗಳನ್ನು ಮಾಡಿಕೊಂಡು ವಾಸಿಸುತ್ತಿದ್ದು, ಅಲ್ಲಿಗೆ ಮೂಲಭೂತ ಸೌಕರ್ಯಗಳನ್ನು ಮಂಜೂರುಗೊಳಿಸಲು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಕಾಯಿದೆ ಅಡ್ಡಿಯಾಗಿತ್ತು. 2006 ರಲ್ಲಿ ಅಂದಿನ ಕೇಂದ್ರದ ಯು.ಪಿ.ಎ. ಸರ್ಕಾರವು ಅರಣ್ಯ ಹಕ್ಕು ಕಾಯಿದೆ ೨೦೦೬ ನ್ನು ಜಾರಿ ಮಾಡಿದ ನಂತರ ಪ್ರಥಮ ಬಾರಿಗೆ 2017 ರಲ್ಲಿ ನಡ ಮತ್ತು ಸವಣಾಲು ಗ್ರಾಮದ ಪಿಲಿಕಳ ಪ್ರದೇಶಕ್ಕೆ ವಿದ್ಯುತ್ ಸಂಪರ್ಕವಾಯಿತು ಎಂದು ತಿಳಿಸಿದರು.

2014ರ ನಂತರ ಅಧಿಕಾರಕ್ಕೆ ಬಂದ ಬಿ.ಜೆ.ಪಿ.ನೇತೃತ್ವದ ಕೇಂದ್ರ ಸರ್ಕಾರ ಮೂಲಭೂತ ಸೌಕರ್ಯಗಳಿಗಾಗಿ ಆನ್‌ಲೈನ್ ಅರ್ಜಿಗಳನ್ನು ಸಂಬಂದಪಟ್ಟ ಇಲಾಖೆಗಳ ಮೂಲಕ ಸಲ್ಲಿಸಲು ಆದೇಶಿಸಿತ್ತು. ಆದರೆ ಕೆಲ ಶರತ್ತುಗಳನ್ನು ವಿಧಿಸಿದ ಕಾರಣ ಅನುಮತಿ ದೊರಕಲು ವಿಳಂಬವಾಗುತ್ತಿತ್ತು. 2016ರಲ್ಲಿ ಸುಲ್ಕೇರಿಮೊಗ್ರು ಪ್ರದೇಶಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿದಾಗ, 2019 ರಲ್ಲಿ ವನ್ಯಜೀವಿ ಮಂಡಳಿ, ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಅನುಮೋದನೆ ದೊರೆತ ಬಳಿಕ ೨೦೧೯ರಲ್ಲಿಯೇ ಅರಣ್ಯ ಹಕ್ಕು ಕಾಯ್ದೆಯಡಿ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಪರವಾಣಿಗೆ ದೊರೆತಿರುವುದು 2025ರಲ್ಲಿ ಎಂದು ಹೇಳಿದರು.

2024ರ ಡಿಸೆಂಬರ್ ತಿಂಗಳಲ್ಲಿ ಸಿದ್ಧರಾಮಯ್ಯ ಅವರು ಆದಿವಾಸಿಗಳ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಮಟ್ಟದ ವಿಶೇಷ ಸಭೆ ನಡೆಸಿದ ಬಳಿಕ ಕುದುರೆ ರಾಷ್ಟ್ರೀಯ ಉದ್ಯಾನವನದ ನಿವಾಸಿಗಳಿಗೆ ವಿದ್ಯುತ್ ಒದಗಿಸುವ ನಿಟ್ಟಿನಲ್ಲಿ, ಸುಲ್ಕೇರಿಮೊಗ್ರು ಗ್ರಾಮದ ಅನುಮತಿಗಾಗಿ ಬಾಕಿಯಿದ್ದ ಅರ್ಜಿಗೆ ಅನುಮತಿ ದೊರೆಕಿತ್ತು ಎಂದು ತಿಳಿಸಿದರು.
ತಾ.ಪಂ ಮಾಜಿ ಸದಸ್ಯ ಜಯರಾಮ ಅಲಂಗಾರು ಮಾತನಾಡಿ ಮಲೆಕುಡಿಯರು ಮುಗ್ದರಾಗಿದ್ದು, ರಾಷ್ಟ್ರೀಯ ಉದ್ಯಾನವನದ ಆನೇಕ ಕಡೆಗಳಲ್ಲಿ ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ಆಗಿಲ್ಲ, ಕಸ್ತೂರಿರಂಗನ್ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಯಾರೂ ಮಾತನಾಡಿಲ್ಲ ಬಿಜೆಪಿ ಎಂ.ಪಿಗಳು ದೆಹಲಿಯಲ್ಲಿ ಪ್ರತಿಭಟನಾ ಧರಣಿ ನಡೆಸಲಿ ಎಂದು ತಿಳಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಮಾತನಾಡಿ, ಕುದುರೆಮುಖ ರಾಷ್ಟೀಯ ಉದ್ಯಾನವನ ವ್ಯಾಪ್ತಿಯ 9 ಗ್ರಾಮಗಳಲ್ಲಿ ಮೂಲ ಸೌಕರ್ಯಗಳಿಲ್ಲ. ಎರಡು ಗ್ರಾಮದ್ದು ಆಗಿದೆ. ಎಫ್.ಸಿ ಕ್ಲಿಯರ್ ಆದರೆ ಮಾತ್ರ ಅನುಮತಿ ನೀಡುತ್ತಾರೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ, ಪ್ರಮುಖರಾದ ಸುಕುಮಾರ್ ಹಾಗೂ ನಾವೂರು ಮತ್ತು ಕುತ್ಲೂರಿನ ಮಲೆಕುಡಿಯ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya
error: Content is protected !!