September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ಬಿಪಿಎಲ್ ಕಾರ್ಡ್ ದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ – ಕೆವೈಸಿ ಆರಂಭಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಕೆಲವೆಡೆ ಈ ಪ್ರಕ್ರಿಯೆ ಆರಂಭವಾಗಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಫಲಾನುಭವಿಗಳು ಬಯೋಮೆಟ್ರಿಕ್ಸ್, ಆಧಾರ್ ಸಂಖ್ಯೆಯೊಂದಿಗೆ ಇ-ಕೆವೈಸಿ ಮಾಡಿಸಬೇಕು.

ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ಇಲಾಖೆ ತಿಳಿಸಿದ ನಿಗದಿತ ಸಮಯದೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಆಹಾರ ಇಲಾಖೆ ತಿಳಿಸಿದೆ. ವಿಶೇಷವಾಗಿ ಈ ಹಿಂದೆ ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರದಾರರು ಇದನ್ನು ಕಡ್ಡಾಯವಾಗಿ ನವೀಕರಿಸಬೇಕಾಗಿದೆ. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಅಂತಹ ಸದಸ್ಯರ ಹೆಸರನ್ನು ಪಡಿತರ ಪಟ್ಟಿಯಿಂದ ತಾತ್ಕಾಲಿಕವಾಗಿ ತೆಗೆದುಹಾಕಲಾಗುತ್ತದೆ ಮತ್ತು ಪಡಿತರ ವಿತರಣೆಯನ್ನು ಸ್ಥಗಿತಗೊಳಿಸಲಾಗುತ್ತದೆ.

ಇ-ಕೆವೈಸಿ ಮಾಡುವುದು ಹೇಗೆ?
ನ್ಯಾಯಬೆಲೆ ಅಂಗಡಿಯ ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರು ತಮ್ಮ ಆಧಾರ್ ಕಾರ್ಡ್ನೊಂದಿಗೆ ಸ್ಥಳೀಯ ನ್ಯಾಯಬೆಲೆ (ರೇಷನ್) ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ (ಬೆರಳಚ್ಚು) ನೀಡುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು. ಈಗಾಗಲೇ ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳ BPL ಹಾಗೂ ಅಂತ್ಯೋದಯ ಪಡಿತರ ಚೀಟಿಗಳ EKYC ಆಗಬೇಕಾದವರ ಸದಸ್ಯರ ಪಟ್ಟಿ ನೀಡಲಾಗಿದೆ.

ಈ ಪಟ್ಟಿಯಲ್ಲಿ ಇರುವವರು 10 ನೇ ತಾರೀಕಿನ ಒಳಗಾಗಿ ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ ಮಾತ್ರ), ಗ್ಯಾಸ್ ಪುಸ್ತಕದೊಂದಿಗೆ ಕಡ್ಡಾಯವಾಗಿ ನಿಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ EKYC ಮಾಡಿಕೊಳ್ಳಬೇಕು.

ಈ ಕೆಳಗಿನ ಲಿಂಕ್ ಬಳಸಿ ಪಟ್ಟಿ ನೋಡಬಹುದು

https://drive.google.com/file/d/1I7KG-Jv657NxjIQwhsMMFP_dIlawIMBJ/view?usp=drivesdk

Related posts

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
error: Content is protected !!