September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆ ಒಕ್ಕೂಟದ ವತಿಯಿಂದ ಆರಿ ವರ್ಕ್ ತರಬೇತಿ ಕಾರ್ಯಾಗಾರ

ಅಂಡಿಂಜೆ : ತಾಲೂಕು ಪಂಚಾಯತ್ ಬೆಳ್ತಂಗಡಿ ಗ್ರಾಮ ಪಂಚಾಯತ್ ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಆಶ್ರಯದಲ್ಲಿ ನಡೆದ 15 ದಿನದ ಆರಿ ವರ್ಕ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುದರ್ಶಿನಿ ಹೆಗ್ಡೆ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ದ ಸಿಇಒ ಜ್ಯೋತಿರಾಜ್ ಮಾತನಾಡಿ ಗ್ರಾಮೀಣ ಭಾಗದ ಮಹಿಳೆಯರು ಇಂಥ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಜೀವನೋಪಾಯಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಹಿತಿ ನೀಡಿದರು.ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ., ತಾಲೂಕು ಕೃಷಿಯೇತರ ವ್ಯವಸ್ಥಾಪಕರಾದ ನಿತೀಶ್ ಕುಮಾರ್.,ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಶುಭಲಕ್ಷ್ಮಿಮತ್ತು ತರಬೇತುದಾರರಾದ ನಿಶ್ಚಿಂತ ಜೈನ್., ಶಿಬಿರಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಿದರು.

ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಅಕ್ಷತ ನಿರೂಪಿಸಿ, ವಿಂಧ್ಯ ಮತ್ತು ತಂಡ ಪ್ರಾರ್ಥಿಸಿದರು ., ನಮಿತಾ ಸ್ವಾಗತಿಸಿ., ಯಶವಂತಿ ಧನ್ಯವಾದವಿತ್ತರು.

Related posts

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya
error: Content is protected !!