ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳು ಮತ್ತು ಮಹಾಪುರುಷರ ಜಯಂತಿ ಆಚರಣೆ ಸಮಿತಿ ವತಿಯಿಂದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಸೆ. 4 ರಂದು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು.

ತಹಶೀಲ್ದಾರ್ ಎಸ್. ಎನ್. ನರಗುಂದ ಅಧ್ಯಕ್ಟತೆ ವಹಿಸಿದ್ದರು. ಉಜಿರೆ ಎಸ್ ಡಿಎಂ ಕಾಲೇಜಿನ ಕುಲಸಚಿವ, ಸಂಸ್ಕೃತ ಪ್ರಾಧ್ಯಪಕ ಶ್ರೀಧರ್ ಶೆಟ್ಟಿ ಪ್ರಧಾನ ಭಾಷಣ ಮಾಡಿದರು. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಗೊಲ್ಲ ಸಮಾಜ ಸೇವಾ ಸಂಘ ಬೆಳ್ತಂಗಡಿ ವಲಯ ಅಧ್ಯಕ್ಷ ಹೆಚ್. ರತ್ನಾಕರ ರಾವ್, ತಾಲೂಕು ಯಾದವ ಸಭಾ ಸಮಿತಿ ಅಧ್ಯಕ್ಷ ರಾಧಕೃಷ್ಣ ತಚ್ಚಮೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಸಮಾಜ ಭಾಂಧವರು, ಇಲಾಖಾ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.












