ಬೆಳ್ತಂಗಡಿ: ಚಾರ್ಮಾಡಿ ಸಮೀಪ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ.
ಆ 3 ರಂದು ರಾತ್ರಿಯ ವೇಳ ಅಪಘಾತ ಸಂಭವಿಸಿದೆ ತರಕಾರಿ ತುಂಬಿದ ಈಚರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ದಯಾನಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.












