September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ ಕಾಣಿಸಿಕೊಂಡಿದೆ. ರಸ್ತೆಯ ಸಮೀಪವೇ ಕಾಡಾನೆ ಸಂಚರಿಸುತ್ತಿರುವುದನ್ನು ಗಮನಿಸಿದ ವಾಹನ ಸವಾರರು ಕೆಲಕಾಲ ಆತಂಕಗೊಂಡಿದ್ದಾರೆ. ಕಾಡಾನೆ ರಸ್ತೆಯ ಬದಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯವನ್ನು ಕೆಲವರು ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದಾರೆ.
ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಆಗಾಗ ಕಂಡುಬರುತ್ತಿದ್ದು, ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಇರುವ ಅಗತ್ಯವಿದೆ.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!