September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಶಿಕ್ಷಕರ ದಿನಾಚರಣೆ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಆ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ , ಶ್ರೀ.ಕ್ಷೇ.ಧ.ಗ್ರಾ.ಯೋ., ಧರ್ಮಸ್ಥಳ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ , ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ., ಬೆಳ್ತಂಗಡಿ ತಹಶೀಲ್ದಾರರು ಎಸ್.ಎನ್. ನರಗುಂದ , ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್. ಉಪಸ್ಥಿತರಿದ್ದರು.


ಈ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಗಳು, ಮುಖ್ಯಾಧಿಕಾರಿಗಳು, ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮಪಂಚಾಯತ್ ಆಡಳಿತಾಧಿಕಾರಿಗಳು, ತಾಲ್ಲೂಕಿನ ಪಾಥಮಿಕ ಮತ್ತು ಪ್ರೌಢಶಾಲಾ ‘ಎಲ್ಲಾ ಶಿಕ್ಷಕ ಸಂಘಗಳ ಹಾಗೂ ಲಿಪಿಕ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!