ಶಿಶಿಲದಲ್ಲಿ ನಡೆಯಲಿರುವ ಶ್ರೀ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರಿಗೆ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಶಿಶಿಲದ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳ ಆಯೋಜನೆಗೆ ಅನುಕೂಲವಾಗುವಂತೆ ನೂತನ ಮೈಕ್ ಹಾಗೂ ಸೌಂಡ್ ಸಿಸ್ಟಂ ವ್ಯವಸ್ಥೆಯನ್ನು ಶಾಸಕರು ಕಲ್ಪಿಸಿಕೊಟ್ಟರು. ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ವ್ಯವಸ್ಥೆಯು ಬಹಳ ಉಪಯುಕ್ತವಾಗಲಿದ್ದು, ಇದಕ್ಕಾಗಿ ಶಾಸಕರಿಗೆ ಶಿಶಿಲ ಗಣೇಶೋತ್ಸವ ಸಮಿತಿಯ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.
ಶಿಶಿಲದ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸದಾ ಸಹಕಾರ ನೀಡುತ್ತಿರುವ ಶಾಸಕರಿಗೆ ಸಮಿತಿಯ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.












