September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಸೆ.5 ರಂದು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ಶಿಕ್ಷಣತಜ್ಞ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದವರು ಪುಷ್ಪಾರ್ಚನೆ ಸಲ್ಲಿಸಿದರು.

ಶಿಕ್ಷಕರಿಗಾಗಿ ವಿಶೇಷವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಿ ಶಿಕ್ಷಕರನ್ನು ಉತ್ಸಾಹದಿಂದ ಭಾಗವಹಿಸುವಂತೆ ಮಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಿ, ಶಿಕ್ಷಕರಿಗೆ ಸಂಭ್ರಮದ ಕ್ಷಣಗಳನ್ನು ನೀಡಿದವು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ.ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಾದ ವಂಶಿ ಹಾಗೂ ಮೆಲ್ರಿನ್ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿ ನಿನಾದ್ ಸ್ವಾಗತಿಸಿ, ವಿದ್ಯಾರ್ಥಿ ಸಿದ್ಧಾಂತ್ ವಂದಿಸಿದರು.

ಶಿಕ್ಷಕರಿಗೆ ಗೌರವ ಹಾಗೂ ಕೃತಜ್ಞತೆ ಸಲ್ಲಿಸುವ ಮೂಲಕ ಆಚರಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವೆ ಆತ್ಮೀಯತೆಯನ್ನು ಹೆಚ್ಚಿಸಿತು.

Related posts

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya
error: Content is protected !!