September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರು ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ಶಿಕ್ಷಣತಜ್ಞ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಆಟಗಳು, ಸ್ಪರ್ಧೆಗಳು ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಿ ಶಿಕ್ಷಕರನ್ನು ಸಂತಸಗೊಳಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಪ್ರದರ್ಶನವು ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ಶಿಕ್ಷಕರಿಗೆ ಗೌರವ, ಕೃತಜ್ಞತೆ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Related posts

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!