September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ


ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಆ.29 ರಂದು ಜರಗಿತು.


ಕಾರ್ಯಕ್ರಮದಲ್ಲಿ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೊ ಕಬಡ್ಡಿ ಆಟಗಾರ ಗಗನ್ ಗೌಡ ಮಾತನಾಡಿ , ಕ್ರೀಡೆ ನಮ್ಮಲ್ಲಿ ಶಿಸ್ತು, ಸಮಯ ಪಾಲನೆ, ಆತ್ಮವಿಶ್ವಾಸ, ಸಹಕಾರ ಮತ್ತು ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ಕ್ರೀಡೆ ಮೂಲಕ ಆರೋಗ್ಯವಂತ ದೇಹ, ಚುರುಕಾದ ಮನಸ್ಸು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಆರೋಗ್ಯಕರ ಜೀವನಕ್ಕೆ ಕ್ರೀಡೆ ಉತ್ತಮ ಮಾರ್ಗ ಎಂದು ತಿಳಿಸಿದರು.

ವಿದ್ಯಾರ್ಥಿನಿ ಸುಷ್ಮಾ ದಿನ ವಿಶೇಷತೆಯ ಕುರಿತು ಮಾತನಾಡಿದರು. ಉಷಾ ಏನ್ ಉಡುಪ ಸ್ಮರಣಾರ್ಥ ದತ್ತಿ ನಿಧಿಯಿಂದ ವಿದ್ಯಾರ್ಥಿಗಳಿಗೆ ಪಾದರಕ್ಷೆಯನ್ನು ಗಿರೀಶ್ ಭಾರಿತ್ತಾಯ ಪಾರಳ ವಿತರಿಸಿದರು.
ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ನೀಡಿದ ವಿದ್ಯಾರ್ಥಿಗಳ ಶಾಲಾ ಶುಲ್ಕ ಮತ್ತು ಐಡಿ ಕಾರ್ಡ್ ನ್ನು ಹಿರಿಯ ವಿದ್ಯಾರ್ಥಿಗಳಾದ ಗಣೇಶ್ ಕನಿಕ್ಕಿಲ ಮತ್ತು ರಾಧಾಕೃಷ್ಣ ಮಾಯ ವಿತರಿಸಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದೂರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಮೀಳಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕರಾದ ಕೃಷ್ಣಾನಂದ ರಾವ್ ಸ್ವಾಗತಿಸಿ, ಕಿರಣ್ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya
error: Content is protected !!