September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಕಟ್ಟಡಕ್ಕೆ ನೋಟೀಸ್ ಅಂಟಿಸಿದ್ದಾರೆ.

ಲಾಯಿಲ ಗ್ರಾಮ ಪಂಚಾಯಿತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಪ್ಪ ಎಂಬವರು ಪಡ್ಲಾಡಿ ಬಳಿ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಗಳಿಲ್ಲದೆ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಈ ವೇಳೆ ಮಾಹಿತಿ ಮೇರೆಗೆ ಸೂರಪ್ಪ ಅವರಿಗೆ ನೋಟೀಸ್ ನೀಡಲಾಗಿದೆ ಎಂದು ಗ್ರಾಮ ಆಡಳಿತಾಧಿಕಾರಿ ತಹಶೀಲ್ದಾರ್ ಗೆ ತಿಳಿಸಿದ್ದು ಸೂರಪ್ಪ ಅವರಲ್ಲಿ ತಹಶೀಲ್ದಾರ್ ಅವರು ಸಂಪರ್ಕಿಸಿ ಮಾಹಿತಿ ಕೇಳಿದಾಗ ಮನೆ ನಾನು ನಿರ್ಮಿಸುತ್ತಿಲ್ಲ, ನೋಟೀಸ್ ಸಿಕ್ಕಿದ ನಂತರ ಕೆಲಸವನ್ನು ನಿಲ್ಲಿಸಿದ್ದೇನೆ ಎಂಬ ಉತ್ತರವನ್ನು ನೀಡಿದ್ದರು.
ಈ ಸರ್ಕಾರಿ ಜಾಗವನ್ನು ಸಾರ್ವಜನಿಕ ಗ್ರಂಥಾಲಯ ನಿರ್ಮಾಣಕ್ಕಾಗಿ ಮೀಸಲಿಡುವಂತೆ 21-12-2023 ರಂದು ಲಾಯಿಲ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು.

ಮತ್ತೆ ರಾಜು ಮೇಸ್ತ್ರಿ ಎಂಬವರು ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಸ್ಥಳೀಯರು ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್.ನರಗುಂದ ಅವರ ಗಮನಕ್ಕೆ ದೂರು ಸಲ್ಲಿಸಿದ್ದು, ದೂರಿನ ಹಿನ್ನೆಲೆಯಲ್ಲಿ ತಹಶೀಲ್ದಾರ್, ಕಂದಾಯ ನಿರೀಕ್ಷಕರು ರಾಜು ಲಾಮಣಿ , ಗ್ರಾಮ ಆಡಳಿತಾಧಿಕಾರಿ ರನಿತಾ ಅವರು ಆ.24 ರಂದು ಬೆಳಗ್ಗೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಎಲ್ಲಾ ಬೆಳವಣಿಗೆ ನಂತರ ಕಟ್ಟಡ ತೆರವುಗೊಳಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಕಚೇರಿಯಿಂದ ಸೆ.3 ರಂದು ನೋಟೀಸ್ ಜಾರಿಗೊಳಿಸಲಾಗಿದ್ದು,. ಅಧಿಕಾರಿಗಳು ಸೆ.4 ರಂದು ಸ್ಥಳಕ್ಕೆ ತೆರಳಿದಾಗ ಸೂರಪ್ಪ ಅವರು ಸ್ಥಳಕ್ಕೆ ಬಾರದೆ ಇದ್ದಾಗ ಕಟ್ಟಡದ ಬಾಗಿಲಿಗೆ ನೋಟೀಸ್ ಅಂಟಿಸಿದ್ದಾರೆ.


ಬೆಳ್ತಂಗಡಿ ಕಂದಾಯ ನಿರೀಕ್ಷಕ ರಾಜು ಲಮಾಣಿ, ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ತಾರಾನಾಥ್ ನಾಯ್ಕ್,ಲಾಯಿಲ ಗ್ರಾಮ ಆಡಳಿತ ಅಧಿಕಾರಿ ರನಿತಾ, ಲಾಯಿಲ ಗ್ರಾಮ ಸಹಾಯಕ ಸತೀಶ್ ಹಾಗೂ ಬೆಳ್ತಂಗಡಿ ಪೊಲೀಸರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya
error: Content is protected !!