September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.6: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರಿನಲ್ಲಿ 4ನೇ ವರ್ಷದ ಮೊಸರು ಕುಡಿಕೆ ಉತ್ಸವ: ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ಧೆ,ಮುದ್ದುಕೃಷ್ಣ,ಬಾಲಕೃಷ್ಣ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 4ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.6ರಂದು ನಿಟ್ಟದ್ದ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆದಿತ್ಯವಾರ ಬೆಳಗ್ಗೆ 8.30ರಿಂದ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ,ವಿವಿಧ ಮನರಂಜನಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಮುದ್ದುಕೃಷ್ಣ ಸ್ಪರ್ಧೆ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದು, ಪುಟಾಣಿಗಳು ಶ್ರೀಕೃಷ್ಣನ ವೇಷದಲ್ಲಿ ಪಾಲ್ಗೊಂಡು ಸಂಭ್ರಮಿಸಲಿದ್ದಾರೆ.ವಿಶೇಷವಾಗಿ ಮುದ್ದುಕೃಷ್ಣ, ಬಾಲಕೃಷ್ಣ ಸ್ಪರ್ಧೆ ಪುಟಾಣಿಗಳಿಗೆ ನಡೆಯಲಿದೆ‌.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ,ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ,ಉದ್ಯಮಿಗಳಾದ ನಾಗೇಶ್ ಬರಾಯ,ರಾಕೇಶ್ ಹೆಗ್ಡೆ,ಶೇಖರ್ ದೇವಾಡಿಗ ಪಾಲಬೆ,ಲೋಹಿತ್ ಕುಮಾರ್ ಮುಳಿಯ,ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್,ಸಂತೋಷ್ ಪಿ ಕೋಟ್ಯಾನ್ ಬಳಂಜ, ಸುರೇಶ್ ಪೂಜಾರಿ ಜೈಮಾತ ,ರಂಜಿತ್ ಹೆಚ್.ಡಿ,ಮನೋಹರ್ ಬಳಂಜ,ಜಗದೀಶ್ ರೈ ಹಾನಿಂಜ, ಸೂರಾಜ್ ಹಾನಿಂಜ,ಸಚಿನ್ ಶೆಟ್ಟಿ ಕುರೆಲ್ಯ,ಸದಾನಂದ ಸಾಲಿಯಾನ್ ಬಳಂಜ, ರೂಪನಾಥ ವೈ.ಎಲ್,ಪ್ರಕಾಶ್ ಪೂಜಾರಿ ಬೊಕ್ಕಸ,ದೀಪಕ್ ಹೆಚ್.ಡಿ,ದಿನೇಶ್ ಪೂಜಾರಿ ಅಂತರ, ಪ್ರವೀಣ್ ಪೂಜಾರಿ ಲಾಂತ್ಯಾರು, ಗಣೇಶ್ ಸಂಭ್ರಮ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

Related posts

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya
error: Content is protected !!