ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಕರನ್ನು ಮನರಂಜಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನಗಳನ್ನು ವಿತರಿಸಿ, ಎಲ್ಲಾ ಶಿಕ್ಷಕರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜೇಂದ್ರ ಆಚಾರ್ಯ ಮತ್ತು ಅವರ ಪತ್ನಿಯಾದ ಕುಂಭಶ್ರೀ ಶಾಲಾ ಶಿಕ್ಷಕಿ ಶ್ರೀಮತಿ ವಾಣಿ ರಾಜೇಂದ್ರ ಆಚಾರ್ಯ ಅವರು ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ. ಎಚ್., ಸಂಸ್ಥೆಯ ಸಂಚಾಲಕರಾದ , ಅಶ್ವಿತ್ ಕುಲಾಲ್,
ಪ್ರಾಂಶುಪಾಲರಾದ ಶ್ರೀನಿವಾಸ್ ನಾಯ್ಕ್, ಕುಂಭಶ್ರೀ ಶಾಲಾ ಆಡಳಿತ ಅಧಿಕಾರಿಯ ಮನೋಜ್ ಮುಖ್ಯೋಪಾಧ್ಯಾಯನೀಯರು, ಉಪನ್ಯಾಸಕರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












