September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುದೀಕರಣಕ್ಕೆ ಅನುಮತಿ ದೊರಕಿಸುವಲ್ಲಿ ವಿಶೇಷ ಶ್ರಮವಹಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಕುತ್ಲೂರು ಗ್ರಾಮಸ್ಥರಿಂದ ಸನ್ಮಾನ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, ವಿದ್ಯುತ್ ಮಾರ್ಗ ಅಳವಡಿಸಲು ಅಗತ್ಯ ವನ್ಯಜೀವಿ ಮಂಡಳಿಯ ಅನುಮತಿ ದೊರೆತ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.

ಈ ಭಾಗದ ಜನರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವನ್ಯಜೀವಿ ಮಂಡಳಿಯ ಅನುಮತಿ ದೊರಕಿಸಲು ಶಾಸಕ ಹರೀಶ್ ಪೂಂಜ ಅವರು ನಿರಂತರ ಪ್ರಯತ್ನ ನಡೆಸಿದ್ದರು. ಅನುಮತಿ ದೊರೆತಿರುವುದರಿಂದ ಹಲವು ವರ್ಷಗಳಿಂದ ವಿದ್ಯುತ್ ಸೌಲಭ್ಯಕ್ಕಾಗಿ ಕಾಯುತ್ತಿದ್ದ ಅರಣ್ಯ ಪ್ರದೇಶದ ಜನರಲ್ಲಿ ಸಂತಸ ಮೂಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಸಾಧ್ಯವಾದಷ್ಟು ಬೇಗ ಅಗತ್ಯ ಅರಣ್ಯ ಕ್ಲಿಯರೆನ್ಸ್ ಪಡೆದು ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಕೇವಲ ತಾತ್ಕಾಲಿಕ ಪರಿಹಾರವಲ್ಲದೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3(2)ರ ಅನುಷ್ಠಾನಕ್ಕೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.

“ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಜನರೂ ಮೂಲಭೂತ ಸೌಲಭ್ಯಗಳನ್ನು ಪಡೆಯುವುದು ಅವರ ಹಕ್ಕು. ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು. ಈ ಭಾಗದ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೆ ಪ್ರಯತ್ನ ಮುಂದುವರಿಯಲಿದೆ,” ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

Related posts

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya
error: Content is protected !!