September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಲ್ಲ ಶಿಕ್ಷಕರು ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವ ಮೂಲಕ ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಆತ್ಮೀಯ ಸ್ವಾಗತ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮ್ಯಾನೇಜರ್ ಸಿಸ್ಟರ್ ತೆರೇಸಿಯಾ ಸೆರಾ ವಹಿಸಿದ್ದರು. ಪ್ರಾಂಶುಪಾಲರಾದ ಸಿಸ್ಟರ್ ಮೋಲಿ ಡಿಕುನ್ಹ ಅವರು ಮಾತನಾಡಿ, ಶಿಕ್ಷಕರ ಮಹತ್ವ ಹಾಗೂ ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರದ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಲ್ಲ ಶಿಕ್ಷಕರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು. ಶಿಕ್ಷಕರಿಗಾಗಿ ವಿದ್ಯಾರ್ಥಿಗಳ ವತಿಯಿಂದ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಾಡು, ನೃತ್ಯ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಶಿಕ್ಷಕರಿಗೆ ಗೌರವ ಸಮರ್ಪಿಸಿದರು.

Related posts

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!