September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ವಾರ್ಷಿಕ ಮಹಾಸಭೆ: ರೂ.1.69 ಕೋ. ಲಾಭ, ಶೇ. 13 ಡಿವಿಡೆಂಡ್

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ 2025- 2026 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 6ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಅರಸಿನಮಕ್ಕಿಯಲ್ಲಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ರವರ ಅಧ್ಯಕ್ಷ ತೆಯಲ್ಲಿ ಜರುಗಿತು.

ನಿರ್ದೇಶಕ ಧರ್ಮರಾಜ್ ಎ ಸ್ವಾಗತಿಸಿದರು. ವಾರ್ಷಿಕ ವರದಿ ಹಾಗೂ ಲೆಕ್ಕ ಪರಿಶೋಧನಾ ವರದಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ನೀಡಿದರು.
ವರದಿ ವರ್ಷದಲ್ಲಿ ಸಂಘವು ರೂ. 366 ಕೋ. ವ್ಯವಹಾರ ನಡೆಸಿದ್ದು, ರೂ.1.69 ಕೋ. ಲಾಭ ಬಂದಿದೆ. ಸದಸ್ಯರಿಗೆ ಎಂದು ಶೇ. 13 ಡಿವಿಡೆಂಡ್ ಘೋಷಿಸಲಾಯಿತು.

ಈ ಸಂದರ್ಭದಲ್ಲಿ ತೋಟಕ್ಕೆ ಮದ್ದು ಬಿಡುವ ಹಾಗೂ ಅಡಿಕೆ ತೆಗೆಯುವ ವೃತ್ತಿ ಮಾಡುವವರನ್ನು, ಹಾಗೂ ಬೆಸ್ಟ್ ಎಂಎಲ್ಎ ಪುರಸ್ಕಾರ ಪಡೆದ ಶಾಸಕ ಹರೀಶ್ ಪೂಂಜ ಅವರನ್ನು ಸನ್ಮಾನಿಸಲಾಯಿತು. 2025-26ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅರಸಿನಮಕ್ಕಿ ಪ್ರೌಢ ಶಾಲೆ ಮತ್ತು ನೆಲ್ಯಡ್ಕ ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗೆ ಮತ್ತು ಸಂಘದ ಸದಸ್ಯರ ಮಕ್ಕಳ ಪೈಕಿ ಹೊರಗಿನ ಶಾಲೆಯಲ್ಲಿ ಕಲಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗೆ ಗೌರವಧನವನ್ನಿತ್ತು ಪುರಸ್ಕರಿಸಲಾಯಿತು. 2025 -26 ನೇ ಸಾಲಿನಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಅರಸಿನಮಕ್ಕಿ ಇಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗೆ ಗೌರವಧನವನ್ನಿತ್ತು ಪುರಸ್ಕರಿಸಲಾಯಿತು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಉಪಾಧ್ಯಕ್ಷ ರಾಜು ಕೆ. ನಿರ್ದೇಶಕರಾದ ಕೊರಗಪ್ಪ ಗೌಡ, ರತೀಶ್ ಬಿ, ವರದಶಂಕರ ದಾಮ್ಲೆ, ತಾರಾ ಟಿ ಚಿಪ್ಲೂಣ್ ಕರ್, ಗಂಗಾವತಿ, ಬೇಬಿ, ನಾಗೇಶ್ ಜಿ, ಬೇಬಿ ಕಿರಣ್ ಉಪಸ್ಥಿತರಿದ್ದರು.

ನಿರ್ದೇಶಕ ಕೃಷ್ಣಪ್ಪ ಗೌಡ ಧನ್ಯವಾದವಿತ್ತರು. ಸಿಬ್ಬಂದಿಗಳು ಸಹಕರಿಸಿದರು.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya
error: Content is protected !!