32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ದಿನಾಚರಣೆ ಸಂಭ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಿದ್ಯಾರ್ಥಿಗಳೇ ಹೊತ್ತಿದ್ದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಧರ್ಮಸ್ಥಳ ದೇವಳದ ಮಣೆಗಾರರಾದ ವಸಂತ ಭಟ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗುರುವಿನ ಮಹತ್ವ,ಶಿಕ್ಷಕ ವೃತ್ತಿಯ ಮಹತ್ವ,ವಿದ್ಯಾರ್ಥಿ ಹಾಗೂ ಶಿಕ್ಷಕರ ಸಂಬಂಧ,ವಿದ್ಯಾರ್ಥಿಗಳ ಜವಾಬ್ದಾರಿ, ಮೌಲ್ಯಗಳ ಅಗತ್ಯ ಇತ್ಯಾದಿಗಳನ್ನು ಬಹಳ ಸುಂದರವಾಗಿ ವಿವರಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮಾತನಾಡಿ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪಟ್ಟ ಶ್ರಮ,ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗಾಗಿ ಪಡುವ ಶ್ರಮ ಇತ್ಯಾದಿಗಳನ್ನು ವಿವರಿಸಿದರು.

ನಂತರ ಶಿಕ್ಷಕರಿಗೆ ಹಲವು ಸ್ಪರ್ಧೆಗಳನ್ನು ನಡೆಸಿ ಅವರಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ವಿದ್ಯಾರ್ಥಿಗಳು ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ನೆನಪಿನ ಕಾಣಿಕೆಯನ್ನು ನೀಡಿದರು. ಶಾಲೆಯನ್ನು ಮದುವಣಗಿತ್ತಿಯಂತೆ ಸಿಂಗರಿಸಿ ಶಿಕ್ಷಕರನ್ನು ಸ್ವಾಗತಿಸಲು ಸಿದ್ಧತೆಯನ್ನು ನಡೆಸಲಾಗಿತ್ತು. ಶಾಲಾ ವಿದ್ಯಾರ್ಥಿನಿ ಚಿಂತನ ಹಾಗೂ ಶ್ರೇಯ ರೈ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಕುಮಾರಿ ಅನುಷ್ಕಾ ಸ್ವಾಗತಿಸಿ ಕುಮಾರಿ ಅನುಷ್ಕಾ ಧನ್ಯವಾದವಿತ್ತರು.

Related posts

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya
error: Content is protected !!