ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ 2026-27ನೇ ಸಾಲಿಗೆ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ಸೆ. 30 ಆಗಿದ್ದು, ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಮಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.












