32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಗ್ರಾಮ ಪಂಚಾಯತ್ ಗ್ರಾಮ ಸಭೆ: ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಉಪನ್ಯಾಸಕರಿಗೆ ಗೌರವ

ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.8ರಂದು ಪಂಚದುರ್ಗಾ ಸಭಾಭವನ ಆದೂರ್ ಪೆರಾಲ್ ನಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮಹೇಶ್ ಮಂಜಪ್ಪ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಲಕ್ಷ್ಮೀ ಅವರು ಗ್ರಾಮ ಸಭೆಯ ಮುನ್ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ದಯಮಣಿ, ಉಪಾಧ್ಯಕ್ಷ ಹರೀಶ್, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ಸ್ವಾಗತಿಸಿದರು. ಸಿಬ್ಬಂದಿ ವಸಂತ್ ವರದಿ ವಾಚಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya
error: Content is protected !!