32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ. 7ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬಗಳ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾತ್ಮಕ ಕ್ರೀಡೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಲಾ ಉಪನಾಯಕ ಹರೀಶ್ ಪಟೇಲ್ ಕೃಷ್ಣ ಜನ್ಮಾಷ್ಟಮಿಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿ ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು, ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ ಕಾಂಚನ ಅವರು ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀಕೃಷ್ಣನ ಬಾಲಲೀಲೆಗಳನ್ನು ಸ್ಮರಿಸುತ್ತಾ ಆಚರಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಂತಸ ಹಾಗೂ ಉತ್ಸಾಹ ಮೂಡಿಸಿತು.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya
error: Content is protected !!