30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ, ಶಿಕ್ಷಕರ ದಿನಾಚರಣೆ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ವೈಭವದಿಂದ ಆಚರಿಸಲಾಯಿತು.

ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಕೃಷ್ಣ ವೇಷಧಾರಿ ವಿದ್ಯಾರ್ಥಿಗಳು ಕುಣಿತದೊಂದಿಗೆ ಸಾಗಿದರು. ಭಜನಾ ತಂಡದ ವಿದ್ಯಾರ್ಥಿಗಳು ತಾಳಕ್ಕೆ ತಕ್ಕಂತೆ ಭಜನೆ ಹಾಗೂ ನೃತ್ಯ ಪ್ರದರ್ಶಿಸಿ ಮೆರವಣಿಗೆಗೆ ಮೆರುಗು ತಂದರು. ನಂತರ ಮೊಸರಿನ ಮಡಿಕೆ ಒಡೆಯುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪ್ರಾಂಶುಪಾಲೆ ಸುಮಿತ್ರಾ ಗೌಡ ಹಾಗೂ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್‌ ಮರಿಕೆ ಉಪಸ್ಥಿತರಿದ್ದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಿಕ್ಷಕರಿಗಾಗಿ ವಿವಿಧ ಆಟೋಟ ಹಾಗೂ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಶಿಕ್ಷಕರಿಗೆ ಸಿಹಿತಿಂಡಿ ಹಂಚಿ ಶುಭ ಹಾರೈಸಿದರು.

ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆಯ ಸಂಭ್ರಮವು ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಸಂತಸ ಮೂಡಿಸಿತು.

Related posts

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!