29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ, ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ.9 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 10:30 ಗಂಟೆ ವೇಳೆಗೆ ಬಂದು ಕಚೇರಿಯಲ್ಲಿರುವ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಲೋಕಾಯುಕ್ತ ಕೇಂದ್ರ ಕಛೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ,ತನಿಖೆಯ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ‌.

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮ ಪಂಚಾಯತ್, ನೆಕ್ಕಿಲಾಡಿ ಗ್ರಾಮ ಪಂಚಾಯತ್, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್, ಲಾಯಿಲ ಗ್ರಾಮ ಪಂಚಾಯತ್ ಒಟ್ಟು 6 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲದಲ್ಲಿ ಪರಿಶೀಲನೆ ನಡೆಯುತ್ತಿದೆ.

ಲಾಯಿಲ ಗ್ರಾಮ ಪಂಚಾಯತ್ ಗೆ ಉಡುಪಿ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ ಪಿ ಹಾಲಮೂರ್ತಿ ನೇತೃತ್ವದಲ್ಲಿ ನಾಗರಾಜ್ ಸನಿಲ್, ಪ್ರಸನ್ನ, ಅಬ್ದುಲ್ ಜಲಲ್, ಸುದೀಪ್ ಅಧಿಕಾರಿಗಳು ಮತ್ತು ಉಜಿರೆ ಗ್ರಾಮ ಪಂಚಾಯತ್ ಗೆ ಉಡುಪಿ ಜಿಲ್ಲೆಯ ಲೋಕಾಯುಕ್ತ ವಿಭಾಗದ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಸಂಜೆ ತನಕ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
error: Content is protected !!