ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕ ಹಾಗೂ ಪದವಿ ವಿಭಾಗದ ಎನ್.ಎಸ್.ಎಸ್. ಕ್ಲಬ್ ನ ವತಿಯಿಂದ ಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಆವರಣ, ಆಟದ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಕಸವನ್ನು ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯಕ್ರಮವಾಗಿರದೆ, ಪ್ರತಿಯೊಬ್ಬರ ದೈನಂದಿನ ಜೀವನದ ಭಾಗವಾಗಬೇಕು ಎಂಬ ಸಂದೇಶವನ್ನು ನೀಡಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಕಾಪಾಡುವ ಹಾಗೂ ಇತರರಲ್ಲಿಯೂ ಜಾಗೃತಿ ಮೂಡಿಸುವ ಪ್ರತಿಜ್ಞೆ ಕೈಗೊಂಡರು.












