29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ (Leaders Meet) ಕಾರ್ಯಕ್ರಮವು ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣ ಹಾಗೂ ಪುಂಜಾಲಕಟ್ಟೆಯ ಪಕ್ಷದ ಕಚೇರಿಯಲ್ಲಿ ನಡೆಯಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅವರು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್ ಅವರು ಸಮಾರೋಪ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ರಶೀದ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಮುಸ್ತಫಾ ಜಿ.ಕೆ. ಹಾಗೂ ಅಶ್ರಫ್ ಕಟ್ಟೆ, ಬ್ಲಾಕ್ ಅಧ್ಯಕ್ಷರಾದ ಆಸೀಫ್ ಪುಂಜಾಲಕಟ್ಟೆ, ಹಂಝರಾಲಿ ಎಸ್.ಕೆ., ಫಝಲ್ ಉಜಿರೆ ಹಾಗೂ ಸಲೀಂ ಲಾಯಿಲ ಸೇರಿದಂತೆ ಪಕ್ಷದ ವಿವಿಧ ಬ್ಲಾಕ್ ಹಾಗೂ ಬ್ರಾಂಚ್ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ : ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya
error: Content is protected !!