28.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿ

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ.


ಉಜಿರೆ:ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ.ಶ್ರೀ ಗಣೇಶ ಸೇವಾ ಟ್ರಸ್ಟ್ ರಿ) ಸೇವಾ ಘಟಕ ಶಕ್ತಿನಗರ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸೆ .9 ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಲ! ರಘುರಾಮ್ ಶೆಟ್ಟಿ ಸಾಧನ ಇವರು ಉದ್ಘಾಟಿಸಿದರು ಅಧ್ಯಕ್ಷತೆಯನ್ನು ಶ್ರೀ ಮಹಾಬಲ ಮಾರ್ಲ ಅಧ್ಯಕ್ಷರು ಶ್ರೀ ಗಣೇಶ ಸೇವಾ ಟ್ರಸ್ಟ್ ಮಂಗಳೂರು ಇವರು ವಹಿಸಿದರು.


ಸಂಪನ್ಮೂಲ ವ್ಯಕ್ತಿಯಾಗಿ ಡಾ ಮಹಾವೀರ ಜೈನ್ ಇಚಿಲಾಂಪಾಡಿ ಕನ್ನಡ ಉಪನ್ಯಾಸಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಉಜಿರೆ ಇವರು ವಿಕಲಚೇತನ ಮಕ್ಕಳಲ್ಲಿ ಶಿಕ್ಷಕರ ಮಹತ್ವ ಇದರ ಕುರಿತು ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಲ! ನಾಣ್ಯಪ್ಪ ನಾಯ್ಕ್ ಕೋಶಾಧಿಕಾರಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಡಾ! ವಸಂತ್ ಕುಮಾರ್ ಶೆಟ್ಟಿ ಆಡಳಿತ ಅಧಿಕಾರಿ ಸಾನಿಧ್ಯ ಸಮೂಹ ಸಂಸ್ಥೆಗಳು ಮಂಗಳೂರು ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಸಾನಿಧ್ಯದ ಸಲಹಾ ಸಮಿತಿ ಸದಸ್ಯರಾದ ಪ್ರೇಮ ರಾಜ್ ರೋಷನ್ ಸಿಕ್ವೇರಾರು ಡಾ ವಸಂತ್ ಕುಮಾರ್ ಶೆಟ್ಟಿ ಹಾಗೂ ಸಾನಿಧ್ಯ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಮಲ್ಲಿಕಾ ಇವರನ್ನು ಮತ್ತು ಸಾನಿಧ್ಯ ಕೇಂದ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ಸನ್ಮಾನಿಸಿ ಉಡುಗೊರೆಗಳನ್ನು ನೀಡಿದರು. ಪ್ರತಿವರ್ಷದಂತೆ ಈ ಸಲವೂ ಕೂಡ ಎಲ್ಲಾ ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಶ್ರೀ ಗಣೇಶ ಸೇವಾ ಟ್ರಸ್ಟ್ ವತಿಯಿಂದ ಉಡುಗೊರೆಗಳನ್ನು ನೀಡಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಅಭಿಯಂತರರುಗಳಾದ ರೋ!ವಿದ್ಯಾಕುಮಾರ್ ಕಾಂಚೋಡು ಮತ್ತು ಶ್ರೀ ನಾಗೇಶ್ ಕುಮಾರ್ ನೆರಿಯ ಇವರನ್ನು ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ) ಮಂಗಳೂರು ಇವರ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಮಕ್ಕಳಿಗೆ ಹಾಗೂ ಎಲ್ಲಾ ಆಹ್ಹಾನಿತರಿಗ ಬೆಳಗಿನ ಉಪಹಾರ ಮತ್ತುಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಸ್ವಾಗತಿಸಿದರು ಶಾಲಾ ಶಿಕ್ಷಕಿ ಶ್ರೀಮತಿ ಅಕ್ಷತಾ ಧನ್ಯವಾದಗಳು ತಿಳಿಸಿದರು ಶ್ರದ್ಧ ವಸಂತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!