30.7 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

205 ಮಕ್ಕಳಿಗೆ ಸಮವಸ್ತ್ರ, ನಾಲ್ವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ: ಸುರ್ಯ ದೇವಸ್ಥಾನದ ವತಿಯಿಂದ ಸಮಾಜಮುಖಿ ಕಾರ್ಯಕ್ರಮ: ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರಿಂದ ವಿತರಣೆ

ಬೆಳ್ತಂಗಡಿ: ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ ಗ್ರಾಮದ 8 ಅಂಗನವಾಡಿ ಕೇಂದ್ರಗಳ 138 ಮಕ್ಕಳು ಹಾಗೂ ಸ್ಥಳೀಯ ಶಾಲೆಯ 67 ಮಕ್ಕಳು ಸೇರಿದಂತೆ ಒಟ್ಟು 205 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ನಡ ಸರಕಾರಿ ಕಾಲೇಜಿನ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಸೆ.9ರಂದು ನಡೆಯಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯ ಗುತ್ತು ಅವರು ಮಕ್ಕಳಿಗೆ ಸಮವಸ್ತ್ರ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!