32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ನಿವೃತ್ತ ಸಿಇಒ, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಧರಣಿ

ಶಿರ್ಲಾಲು: ನಿವೃತ್ತಿಯ ಸಂದರ್ಭದಲ್ಲಿ ದೊರೆಯಬೇಕಾದ ಪಿಎಫ್, ಗ್ರಾಚ್ಯೂಟಿ ಹಾಗೂ ಗಳಿಕೆ ರಜೆಯ ಸಂಬಳವನ್ನು ನೀಡಿಲ್ಲ ಎಂದು ಆರೋಪಿಸಿ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಹಾಗೂ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿ ಎದುರು ನ್ಯಾಯಕ್ಕಾಗಿ ಶಾಂತಿಯುತ ಧರಣಿ ಸತ್ಯಾಗ್ರಹವನ್ನು ಸೆ 10ರಂದು ನಡೆಸಿದರು.

ಮಿದುಳಿನ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಅಮ್ಮಾಜಿ ಕೋಟ್ಯಾನ್ ಅವರು, ತಮ್ಮ ನಿವೃತ್ತಿಯ ಬಳಿಕ ಸಿಗಬೇಕಾದ ಹಣವನ್ನು ಬಿಡುಗಡೆ ಮಾಡಬೇಕು. ಜೀವನಪೂರ್ತಿ ದುಡಿದು ಗಳಿಸಿದ ಹಣಕ್ಕಾಗಿ ಇದೀಗ ಧರಣಿ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅದೇ ರೀತಿ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು ಹೃದಯದ ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿವೃತ್ತಿಯ ಬಳಿಕ ತಮಗೆ ದೊರೆಯಬೇಕಾದ ಗ್ರಾಚ್ಯೂಟಿ, ಗಳಿಕೆ ರಜೆಯ ಸಂಬಳ ಹಾಗೂ ಎರಡು ವರ್ಷಗಳ ರಜೆ ವೇತನ ಸೇರಿದಂತೆ ಬಾಕಿ ಇರುವ ಹಣವನ್ನು ನೀಡದೆ ಆಡಳಿತ ಮಂಡಳಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿದರು.

ತಮಗೆ ಕಾನೂನುಬದ್ಧವಾಗಿ ದೊರೆಯಬೇಕಾದ ನಿವೃತ್ತಿ ಸೌಲಭ್ಯ ಹಾಗೂ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಆಡಳಿತ ಮಂಡಳಿಯನ್ನು ಅವರು ಆಗ್ರಹಿಸಿದರು.

Related posts

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಮಣ್ಣಿನ ಸಂಸ್ಕೃತಿ, ತುಳು ಜನಪದ ಸೊಗಡಿನೊಂದಿಗೆ ಅಭ್ಯಾಸ್ ಕಾಲೇಜಿನಲ್ಲಿ ಕೆಸರ್ದಕಲ ಸಂಭ್ರಮ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!