32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ನೆಟ್ ಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶಾಲಾ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ 5 ಮಂದಿ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಾಲಾ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಇದೇ ವಿಭಾಗದಲ್ಲಿ ಬೆಸ್ಟ್ ಶೂಟರ್ ಆಗಿ ರೂಪೇಶ್ ಆಯ್ಕೆಯಾಗಿದ್ದಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಾಲಾ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ವಿಭಾಗದಲ್ಲಿ ಬೆಸ್ಟ್ ಶೂಟರ್ ಆಗಿ ಲೋಹಿತ್ ಆಯ್ಕೆಯಾಗಿದ್ದಾರೆ.

ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಹೇಮೊದರ್ ತರಬೇತಿ ನೀಡಿದ್ದರು.

Related posts

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
error: Content is protected !!